ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ ಅಂಬರೀಶ್(Abhishek Ambarish father) ಹಾಗೂ ಪ್ರಸಾದ್ ಬಿದ್ದಪ್ಪ (Aviva father)ಮಗಳು ಅವಿವಾ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಅದ್ದೂರಿ ವಿವಾಹ ಸಮಾರಂಭಕ್ಕೆ ಗಣ್ಯರು ಆಗಮಿಸಿ ಶುಭ ಕೋರಿದ್ದಾರೆ.

 

 

ಅಭಿಷೇಕ್(Abhishek Ambarish marriage) ಬಹುಕಾಲದ ಗೆಳತಿ ಅವಿವಾ(Aviva biddappa) ಜೊತೆ ಹಸೆ ಮಣೆ ಏರಿದ್ದಾರೆ. ಈ ವೇಳೆ ಸ್ಯಾಂಡಲ್ವುಡ್ನ ಅನೇಕ ಸೆಲೆಬ್ರಿಟಿಗಳು ಹಾಜರಿದ್ದರು ಗುರು ಹಿರಿಯರು ನಿಶ್ಚಯಿಸಿದಂತೆ ಬೆಳಗ್ಗೆ ಒಂಬತ್ತು ಮೂವತ್ತರಿಂದ ಹತ್ತು ಮೂವತ್ತು ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಈ ಜೋಡಿ ವಿವಾಹ ಬಂಧನಕ್ಕೆ ಒಳಗಾಗಿದೆ.

 

 

ಇಂದು ಮಾಣಿಕ್ಯ ಚಾಮರಾವ್ ವಜ್ರದಲ್ಲಿ ಕರ್ಕಾಟಕ ಲಗ್ನದಲ್ಲಿ ಮದುವೆ ಸಮಾರಂಭ ನಡೆದಿದ್ದು ಜೂನ್ ಏಳುಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿ ಆರತಾಕ್ಷತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಸಲಾಗಿದೆ.

 

 

ಪ್ಯಾಲೆಸ್ ಗ್ರೌಂಡ್ ನಲ್ಲಿ ನಡೆದ ಈ ಅದ್ದೂರಿ ಮದುವೆಗೆ ಚಿತ್ರರಂಗದ ಸಾಕಷ್ಟು ಸೆಲೆಬ್ರಿಟಿಗಳು ಸಾಕ್ಷಿಯಾಗಿ ಹೊಸ ದಂಪತಿಗಳಿಗೆ ಶುಭಾಶಯ ತಿಳಿಸಿದ್ದಾರೆ. ರಜನಿಕಾಂತ್(rajnikant) ,ಮೋಹನ್ ಬಾಬು, ಯಶ್(yash) ,ಕಿಚ್ಚ ಸುದೀಪ್ (kiccha Sudeep), ಮೇಘನಾ ರಾಜ್(Meghana Raj) ,ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೇರಿದಂತೆ ಹಲವಾರು ಜನ ಮದುವೆಗೆ ಬಂದಿದ್ದರು

 

Advertisement