ಸಿನಿಮಾರಂಗದಲ್ಲಿ ಗುರುತಿಸಿಕೊಂಡಿರುವ ನಟ ನಟಿಯರ ವೃತ್ತಿ ಜೀವನದ ಜೊತೆಗೆ ವೈಯುಕ್ತಿಕ ಜೀವನದ ಕುರಿತು ಕುತೂಹಲ ಅಭಿಮಾನಿಗಳಿಗೆ ಇರುತ್ತದೆ. ಆದರೆ ಕೆಲವು ವೈಯುಕ್ತಿಕ ವಿಚಾರಗಳನ್ನು ಗೌಪ್ಯವಾಗಿಯೇ ಕಾಪಾಡಿಕೊಂಡು ಬರುತ್ತಾರೆ. ಈಗಾಗಲೇ ಬಣ್ಣದ ಲೋಕದಲ್ಲಿ ಬದುಕು ಕಟ್ಟಿಕೊಂಡವರು ಹಲವರು. ಅವರ ಸಾಲಿಗೆ ಸ್ಯಾಂಡಲ್ ವುಡ್ ನಟ ಶ್ರೀ ಮುರುಳಿ (Actor Shreemuruli) ಸೇರಿಕೊಳ್ಳುತ್ತಾರೆ.

ವೃತ್ತಿ ಜೀವನದ ಜೊತೆಗೆ ವೈಯುಕ್ತಿಕ ಜೀವನಕ್ಕೂ ಅಷ್ಟೇ ಮಹತ್ವ ನೀಡುತ್ತಾ ಪತ್ನಿ ಹಾಗೂ ಮಕ್ಕಳ ಜೊತೆಗೆ ಸಮಯ ಕಳೆಯುತ್ತಿರುತ್ತಾರೆ. ಇದೀಗ ನಟ ಶ್ರೀಮುರುಳಿ (Shreemuruli)ಯವರ ಮದುವೆಯ ಅಪರೂಪದ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಫೋಟೋಗೆ ಒಂದೂವರೆ ಸಾವಿರಕ್ಕೂ ಅಧಿಕ ವ್ಯೂಸ್ ಕಂಡಿದೆ. ಈ ಫೋಟೋಗೆ ನೆಟ್ಟಿಗರು ನಾನಾ ರೀತಿಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

PhotoGrid Site 1687161368485

ನಟ ಶ್ರೀಮುರುಳಿ (Actor Shreemuruli) ಅವರು ವಿದ್ಯಾ ಅವರನ್ನು ಪ್ರೀತಿಸಿ ಮದುವೆಯಾದವರು. ನಟನ ಪತ್ನಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುತ್ತಾರೆ. ಪ್ರೀತಿಸಿ ಮದುವೆಯಾದ ಈ ಜೋಡಿಗೆ ಒಂದು ಗಂಡು ಒಂದು ಹೆಣ್ಣು ಮಕ್ಕಳಿದ್ದು ಸುಖವಾಗಿ ಸಂಸಾರ ಮಾಡುತ್ತಿದ್ದಾರೆ.

ವೃತ್ತಿ ಜೀವನದಲ್ಲಿ ಬ್ಯುಸಿಯಾಗಿರುವ ಶ್ರೀಮುರುಳಿಯವರು, ಚಂದ್ರ ಚಕೋರಿ (Chakori) ಚಿತ್ರದ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟರು. ಆದಾದ ಬಳಿಕ, `ಕಂಠಿ’ (Kanti)ಚಿತ್ರವೂ ಸೂಪರ್ ಹಿಟ್ ಆಯಿತು. `ಮಿಂಚಿನ ಓಟ’ ಸಿನಿಮಾದಲ್ಲಿ ಸಹೋದರ ವಿಜಯ್ ರಾಘವೇಂದ್ರ ರವರ ಜೊತೆಗೆ ತೆರೆ ಹಂಚಿಕೊಂಡರು. ಆದಾದ ಬಳಿಕ ಇವರ ವೃತ್ತಿ ಜೀವನಕ್ಕೆ ಬ್ರೇಕ್ ನೀಡಿದ್ದು, `ಉಗ್ರಂ’ ಸಿನಿಮಾ. ಆ ಬಳಿಕ ರಥಾವರ ಮತ್ತು ಮಫ್ತಿ ಚಿತ್ರ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

PhotoGrid Site 1687161221312

ನಟ ಶ್ರೀಮುರುಳಿ ಪತ್ನಿ ವಿದ್ಯಾ ಶ್ರೀಮುರಳಿ ( Vidhya Shreemuruli) ಅರ್ಪಿಸುವ, F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ಎಲ್ಲಾ ನಿನಗಾಗಿ (Yella Ninagagi). ಖ್ಯಾತ ನಟ ಶ್ರೀಮುರಳಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರ ತಂಡಕ್ಕೆ ಶುಭ ಕೋರಿದ್ದರು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ “ಎಲ್ಲಾ ನಿನಗಾಗಿ” ಎಂದು ಹೆಸರಿಡಲಾಗಿದ್ದು, ಈ ಸಿನಿಮಾದ ಬಗ್ಗೆ ಬಹಳ ನಿರೀಕ್ಷೆಯಿದೆ. ಸದ್ಯಕ್ಕೆ ನಟ ಶ್ರೀಮುರುಳಿರವರ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿದ್ದು, ಶೂಟಿಂಗ್ ಎಂದು ಬ್ಯುಸಿಯಾಗಿದ್ದಾರೆ.

Advertisement